ಸಂಸ್ಠೆ

ರಾಷ್ಟ್ರೀಯ ಕನ್ನಡ ಶಿಕ್ಷಣ ಸಂಸ್ಥೆಯು ಭಾಷಾವಾರು ಅಲ್ಪಸಂಖ್ಯಾತ ಸಂಸ್ಥೆಯಾಗಿದ್ದು ವಡಾಲದ ಮಧ್ಯಭಾಗದಲ್ಲಿರುವ ಇಂದೂಲಾಲ್ ಭುವಾ ಮಾರ್ಗದಲ್ಲಿ ಶಾಲೆ ಮತ್ತು ಕಿರಿಯ ಕಾಲೇಜನ್ನು ನಡೆಸುತ್ತಿದೆ. ಈ ಸಂಸ್ಥೆಯು ಶಿಶುಪಾಲನಾ ಕೇಂದ್ರ ಮತ್ತು ಶಿಶು ಅಭಿವೃದ್ಧಿ ಕೇಂದ್ರ, ಪ್ರಾಥಮಿಕ, ಮಾಧ್ಯಮಿಕ, ಶಾಲೆಯೊಂದಿಗೆ ಕಿರಿಯ ಕಾಲೇಜನ್ನು ನಡೆಸಿಕೊಂಡು ಬರುತ್ತಿದೆ. ಶಾಲೆಯಲ್ಲಿ ಸಹಶಿಕ್ಷಣ ಪದ್ದತಿಯಿದ್ದು ಮಹಾರಾಷ್ಟ್ರ ರಾಜ್ಯ ಮಾಧ್ಯಮಿಕ ಹಾಗೂ ಉಚ್ಛ ಮಾಧ್ಯಮಿಕ ಶಿಕ್ಷಣ ಮಂಡಳಿಯ ಪರೀಕ್ಷೆಗೆ ತಕ್ಕಂತೆ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡುತ್ತಿದೆ. ಇದು ಮಹಾರಾಷ್ಟ್ರ ಸರಕಾರದಿಂದ ಅಲ್ಪಸಂಖ್ಯಾತ ಭಾಷಾವಾರು ಶಾಲೆ ಎಂದು ಗುರುತಿಸಲ್ಪಟ್ಟಿದೆ.  ಈ ಶಾಲೆಯು ಇಂಗ್ಲೀಷ್ ಮಾಧ್ಯಮದಲ್ಲಿ ಒಂದರಿಂದ ಹತ್ತನೇ ತರಗತಿಯವರೆಗೆ ಹಾಗೂ ಕನ್ನಡ ಮಾಧ್ಯಮದಲ್ಲಿ 5ರಿಂದ 10ನೇ ತರಗತಿಯವರೆಗೆ ಉತ್ತಮವಾದ ಶಿಕ್ಷಣವನ್ನು ನೀಡುತ್ತಲಿದ್ದು ಶಾಲಾ ಮಾಧ್ಯಮಿಕ ವಿಭಾಗವು ಮಹಾರಾಷ್ಟ್ರ ಸರಕಾರದಿಂದ ಅನುದಾನವನ್ನು ಪಡೆದಿದೆ. ಮತ್ತು ಪ್ರಾಥಮಿಕ ವಿಭಾಗವು ಬ್ರಹತ್ ಮುಂಬಯಿ ಮಹಾನಗರ ಪಾಲಿಕೆಯಿಂದ ಅನುದಾನವನ್ನು ಪಡೆಯುತ್ತಲಿದೆ. ಮಗುವಿನ ಸರ್ವತೋಮುಖ ಬೆಳವಣಿಗೆಯಾಗಲು ವಿದ್ಯಾರ್ಥಿಗೆ ಪಠ್ಯಶಿಕ್ಷಣದೊಂದಿಗೆ ಕಲೆ ಸಾಹಿತ್ಯ , ಸಂಸ್ಕೃತಿ ಹಾಗೂ ಕ್ರೀಡೆಗಳನ್ನು ಒದಗಿಸುವ ಮೂಲಕ ಅವನ ಸರ್ವತೋಮುಖ ಪ್ರಗತಿಯನ್ನು ಸಾಧಿಸುವುದು ಶಾಲೆಯ ಮುಖ್ಯ ಉದ್ದೇಶವಾಗಿದೆ.